ಅಲ್ಪಸಂಖ್ಯಾತರ ಬಿ.ಎಡ್ ಹಾಗೂ ಡಿ.ಎಡ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

Share

ಗದಗ: ಡಿಸೆಂಬರ್ ೭:೨೦೨೦-೨೧ ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಗದಗ ಇವರಿಂದ ಅಲ್ಪಸಂಖ್ಯಾತರ ಬಿ.ಎಡ್ ಹಾಗೂ ಡಿ.ಎಡ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಲ್ಪಸಂಖ್ಯಾತರ (ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಬೌದ್ಧ, ಪರ್ಶಿಯನ್) ವಿದ್ಯಾರ್ಥಿಗಳು ಆನ್‌ಲೈನ್ ಮುಖಾಂತರ ದಿನಾಂಕ: ೨೨.೧೨.೨೦೨೦ ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಆನ್‌ಲೈನ್ ಮುಖಾಂತರ ಸಲ್ಲಿಸಿದ ಅರ್ಜಿಗಳನ್ನು ಖುದ್ದಾಗಿ ಅಭ್ಯರ್ಥಿಗಳೇ ಹಾಜರಾಗಿ, ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಗದಗ ರವರ ಕಛೇರಿಗೆ ದಿನಾಂಕ: ೨೪-೧೨-೨೦೨೦ ರಂದು ಸಾಯಂಕಾಲ ೪.೦೦ ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿರಬೇಕು. ಅಭ್ಯರ್ಥಿಗಳ ಪೋಷಕರ ವರಮಾನ ರೂ ೬.೦೦ ಲಕ್ಷಕ್ಕೆ ಮೀರಿರಬಾರದು. ಅಂಚೆ ತೆರಪು/ಅರೆಕಾಲಿಕ/ದೂರ ಶಿಕ್ಷಣದಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು ಅರ್ಹರಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ರವಿ ಎಲ್ ಗುಂಜೀಕರ, ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ ಭವನ, ಗದಗ ಜಿಲ್ಲಾ ನ್ಯಾಯಾಲಯದ ಎದುರುಗಡೆ, ಗದಗ ದೂರವಾಣಿ: ೦೮೩೭೨-೨೯೭೪೯೪ ರವರನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಲು ಕೋರಿದೆ.