ಗ್ರಾ.ಪಂ. ಚುನಾವಣೆ: 1ನೇ ಹಂತದ ಚುನಾವಣೆಯ ನಾಮಪತ್ರಗಳ ಸಲ್ಲಿಕೆ ಅವಧಿ ಮುಕ್ತಾಯ

Share

ಗದಗ: ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಮ ಪಂಚಾಯತ ಚುನಾವಣೆಗೆ ಅಭ್ಯರ್ಥಿಗಳಿಂದ ನಾಮಪತ್ರಗಳ ಸ್ವೀಕರಿಸುವ ಅವಧಿ ಡಿ.11 ರಂದು ಮುಕ್ತಾಯವಾಗಿದ್ದು ಒಟ್ಟು 801 ಸ್ಥಾನಗಳಿಗೆ 1212 ಮಹಿಳೆಯರು ಸೇರಿದಂತೆ ಒಟ್ಟಾರೆ 2802 ನಾಮಪತ್ರಗಳ ಸಲ್ಲಿಕೆಯಾಗಿವೆ.

ಮೊದಲ ಹಂತದಲ್ಲಿ ಗದಗ ತಾಲೂಕಿನ 26 ಗ್ರಾಮ ಪಂಚಾಯತಗಳ 438 ಸ್ಥಾನಗಳಿಗೆ ಅನುಸೂಚಿತ ಜಾತಿ 251, ಅನುಸೂಚಿತ ಪಂಗಡದ 85, ಹಿಂದುಳಿದ ಅ ವರ್ಗ 263, ಹಿಂದುಳಿದ ಬ ವರ್ಗ 52, ಸಾಮಾನ್ಯ 789 ಒಟ್ಟು 1440 ನಾಮಪತ್ರಗಳು ಸಲ್ಲಿಕೆಯಾಗಿವೆ.

ಲಕ್ಷ್ಮೇಶ್ವರ ತಾಲೂಕಿನ 13 ಗ್ರಾಮ ಪಂಚಾಯತಗಳ 174 ಸ್ಥಾನಗಳಿಗೆ ಅನುಸೂಚಿತ ಜಾತಿಯ 184, ಅನುಸೂಚಿತ ಪಂಗಡದ 55, ಹಿಂದುಳಿದ ಅ ವರ್ಗ 67, ಹಿಂದುಳಿದ ಬ ವರ್ಗ 12, ಸಾಮಾನ್ಯ 337 ಒಟ್ಟು 655 ನಾಮಪತ್ರಗಳು ಸಲ್ಲಿಕೆಯಾಗಿವೆ.
ಶಿರಹಟ್ಟಿ ತಾಲೂಕಿನ 14 ಗ್ರಾಮ ಪಂಚಾಯತಗಳ 189 ಸ್ಥಾನಗಳಿಗೆ ಅನುಸೂಚಿತ ಜಾತಿಯ 157, ಅನುಸೂಚಿತ ಪಂಗಡದ 66, ಹಿಂದುಳಿದ ಅ ವರ್ಗ 93, ಹಿಂದುಳಿದ ಬ ವರ್ಗ 24, ಸಾಮಾನ್ಯ 367 ಒಟ್ಟು 707 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣೆ ಶಾಖೆ ತಿಳಿಸಿದೆ.