ಚಿಗುರು-2020 ಸಾಂಸ್ಕೃತಿಕ ಕಾರ್ಯಕ್ರಮ

Share

ಗದಗ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಚಿಗುರು-2020 ಸಾಂಸ್ಕೃತಿಕ ಕಾರ್ಯಕ್ರಮವನ್ನು ಡಿಸೆಂಬರ್ 1ರಂದು ಸಂಜೆ 5ಗಂಟೆಗೆ ನಗರದ ಒಕ್ಕಲಗೇರಿ ಓಣಿಯ ಶ್ರೀ ರಾಚೋಟೇಶ್ವರ ದೇವಸ್ಥಾನದ ಹತ್ತಿರ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ರಾಜ್ಯದ ಗಣಿ ಮತ್ತು ಭೂ– ವಿಜ್ಞಾನ ಇಲಾಖೆ ಸಚಿವ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಉದ್ಘಾಟಿಸುವರು. ಗದಗ ಶಾಸಕ ಎಚ್.ಕೆ.ಪಾಟೀಲ ಅಧ್ಯಕ್ಷತೆ ವಹಿಸುವರು.

ಗದಗ ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಜುಗೌಡ ಕೆಂಚನಗೌಡ್ರ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಕಳಕಪ್ಪ ಬಂಡಿ, ಸಂಸದರುಗಳಾದ ಶಿವಕುಮಾರ ಉದಾಸಿ, ಪಿ.ಸಿ. ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ್, ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ, ಜಿ.ಪಂ. ಉಪಾಧ್ಯಕ್ಷೆ ಶ್ರೀಮತಿ ಶೋಭಾ ಮೇಟಿ, ತಾ.ಪಂ. ಅಧ್ಯಕ್ಷ ವಿದ್ಯಾಧರ ದೊಡ್ಡಮನಿ, ತಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಮಮತಾಜಬಿ ನದಾಫ್, ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರ ಮುಖ್ಯ ಅತಿಥಿಗಳಾಗಿ ಆಗಮಿಸುವರು.

ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು, ಜಿಲ್ಲಾ ಪೊಲೀಸ ವರಿಷ್ಟಾದಿಕಾರಿ ಯತೀಶ್ ಎನ್ ವಿಶೇಷ ಆಹ್ವಾನಿರಾಗಿರುತ್ತಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ ಸರ್ವರಿಗೂ ಸ್ವಾಗತ ಕೋರಿದ್ದಾರೆ.