ಡಾ. ಅಂಬೇಡ್ಕರ್ ಅವರ ಪರಿನಿರ್ವಾಣ ದಿನ ಆಚರಣೆ

Share

ಗದಗ: ಜಿಲ್ಲಾಡಳಿತ ಭವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ ಅವರ 64ನೇ ಪರಿನಿರ್ವಾಣ ದಿನ ಆಚರಿಸಲಾಯಿತು. ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿದರು.

ಗದಗ-ಬೆಟಗೇರಿ ನಗರಸಭೆ ಆವರಣದಲ್ಲೂ ಸಹ ಇಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ ಅಂಗವಾಗಿ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಡಾ.ಬಿ.ಆರ್. ಅಂಬೇಡ್ಕರ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಮರ್ಪಿಸಿದರು.

ಜಿ.ಪಂ. ಸಿ.ಇ.ಓ ಡಾ. ಆನಂದ ಕೆ. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಯತೀಶ್ ಎನ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನ್ನವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಾಜದ ಇತರೇ ಗಣ್ಯರು ಹಾಜರಿದ್ದರು.