ತಂಬಾಕು ಸೇವನೆ ಅಪಾಯದ ಕುರಿತು ಜನಜಾಗೃತಿ

Share

ಗದಗ: ಜಿಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಮೀಕ್ಷಾ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ, ರೋಣ ಇವರ ಸಂಯುಕ್ತಾಶ್ರಯದಲ್ಲಿಂದು ರೋಣ ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯದಲ್ಲಿ ತಂಬಾಕು ಸೇವೆನಯ ದುಷ್ಪರಿಣಾಮಗಳ ಕುರಿತು ಜನಜಾಗೃತಿ, ಗುಲಾಬಿ ಆಂದೋಲನ ಮತ್ತು ಸಮುದಾಯ ಎನ್‌ಸಿಡಿ ತರಬೇತಿ ಉದ್ಘಾಟನಾ ಸಮಾರಂಭ ಜರುಗಿತು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ಜಗದೀಶ ನುಚ್ಚಿನ ಮಾತನಾಡಿ ತಂಬಾಕು ಸೇವೆನೆಗಳಿಂದ ಆರೋಗ್ಯದ ಮೇಲೆ ತೊಂದರೆ, ಆರ್ಥಿಕ ನಷ್ಟ, ಮಾನಸಿಕ ಖಿನ್ನತೆಯಂತಹ ದುಷ್ಟರಿಣಾಮಗಳು ಯುವ ಪೀಳಿಗೆಯ ಮೇಲೆ ಉಂಟಾಗುತ್ತವೆ ಎಂದರು. ಯುವಜನತೆಗೆ ಈ ಕುರಿತು ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಸಾರ್ವಜನಿಕರಿಗೆ ಮಾಸ್ಕ್ ವಿತರಿಸುವುದರ ಮೂಲಕ ಕೋವಿಡ್-೧೯ ಮುನ್ನಚ್ಚರಿಕೆ ಕ್ರಮಗಳನ್ನು ತಿಳಿಸಿದರು.