ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ: ಎಸ್.ಜಿ.ಸಲಗೆರೆ

Share


ಗದಗ: ತಂಬಾಕು ಸೇವೆನೆಗಳಿಂದ ಆರೋಗ್ಯದ ಮೇಲೆ ಹಲವಾರು ರೀತಿಯ ತೊಂದರೆಗಳು, ಆರ್ಥಿಕ ನಷ್ಟ, ಮಾನಸಿಕ ಕಿನ್ನತೆ ಎದುರಾಗಿ ಯುವ ಪೀಳಿಗೆಯ ಮೇಲೆ ದುಷ್ಟರಿಣಾಮಗಳು ಉಂಟಾಗುತ್ತವೆ ಎಂದು ಹಿರಿಯ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಸ್.ಜಿ.ಸಲಗೆರೆ ಅವರು ಹೇಳಿದರು.

ನಗರದ ಶ್ರೀ ಕ್ಷೇತ್ರ ಧsರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಮೀಕ್ಷಾ ಘಟಕ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಗದಗ ಇವರ ಆಶ್ರಯದಲ್ಲಿ ಕೆಎಸ್‌ಆರ್‌ಟಿಸಿ ಚಾಲಕರು ಹಾಗೂ ನಿರ್ವಾಹಕರಿಗೆ ಶನಿವಾರ ಏರ್ಪಡಿಸಿದ್ದ ತಂಬಾಕು ಸೇವೆಗಳ ದುಷ್ಪರಿಣಾಮಗಳು ಮತ್ತು ಕೋಟ್ಪಾ ೨೦೦೩ರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ತಂಬಾಕು ಸೇವೆನೆಗಳಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಿ ಹಲವಾರು ತೊಂದರೆಗಳಿಗೆ ತುತ್ತಾಗಬೇಕಾಗುತ್ತದೆ. ದುಷ್ಟಚಟಗಳಿಗೆ ದಾಸರಾಗುವುದರಿಂದ ಕುಟುಂಬಗಳ ನೆಮ್ಮದಿ ಹಾಳಾಗಿ ಜೀವನ ಪೂರ್ತಿ ಸಂಕಷ್ಟ ಎದುರಿಸುವ ಸ್ಥಿತಿ ನಿರ್ಮಾಣಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆ ಯುವ ಪೀಳಿಗೆ ತಂಬಾಕು ಸೇವನೆಗಳ ದಾಸರಾಗದೇ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡು ಜೀವನದಲ್ಲಿ ಉನ್ನತ ಸಾಧನೆ ತೋರುವತ್ತ ಗಮನ ನೀಡಬೇಕು ಎಂದರು.