ಯತ್ನಾಳ ಪ್ರತಿಕೃತಿ ದಹನ: ಕೂದಲೆಳೆ ಅಂತರದಲ್ಲಿ ಪಾರಾದ ಕರವೇ ಕಾರ್ಯಕರ್ತ

Share

ಗದಗ: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಬಂದ್ ಕರೆ ನೀಡಿದ ಹಿನ್ನೆಲೆಯಲ್ಲಿ ಗದಗನಲ್ಲಿ ಕರವೇ ಕಾರ್ಯಕರ್ತರು ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿ ಯತ್ನಾಳ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಕರವೇ ಕಾರ್ಯಕರ್ತರ ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದಾಗ ಪ್ರತಿಕೃತಿ ದಹನಕ್ಕೆ ಪೊಲೀಸರು ನೀರು ಸುರಿದರು. ಇದರಿಂದ ರೊಚ್ಚಿಗೆದ್ದ ಕಾರ್ಯಕರ್ತರು ಪೆಟ್ರೋಲ್ ಸುರಿದ್ದರಿಂದ ಏಕಾಏಕಿ ಬೆಂಕಿ ಹತ್ತಿಕೊಂಡಿತು. ಅಲ್ಲಿಯೇ ಇದ್ದ ಕರವೇ ಕಾರ್ಯಕರ್ತರು ದಿಢೀರ್ ಅಂತ ಹಿಂದೆ ಸರಿದು ಭಾರಿ ಪ್ರಮಾಣದ ಅಪಾಯದಿಂದ ತಪ್ಪಿಸಿಕೊಂಡಿದ್ದಾರೆ.