ವಿವಿಧ ಅಭಿವೃದ್ಧಿ ಕಾಮಗಾರಿಗೆ ಸಚಿವ ಸಿ.ಸಿ. ಪಾಟೀಲ ಚಾಲನೆ

Share

ಗದಗ: ರೋಣ ತಾಲ್ಲೂಕಿನ ಸಂದಿಗವಾಡ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ಆಶ್ರಯ ಕಾಲನಿಯಲ್ಲಿನ ಸಿ.ಸಿ.ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅವರು ಇಂದು ಚಾಲನೆ ನೀಡಿದರು.

ನಂತರ ಮಾತನಾಡಿದ ಸಚಿವರು ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಕಳೆದ ಆರೇಳು ತಿಂಗಳಿಂದ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿದ್ದವು. ಸೋಂಕು ನಿಯಂತ್ರಣಕ್ಕೆ ಬರುತ್ತಿರುವುದು, ಜನಸಾಮಾನ್ಯರು ಸಹಜ ಜೀವನಕ್ಕೆ ಮರಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ತೆರಿಗೆ ರೂಪದಲ್ಲಿ ಆದಾಯ ಕ್ರೋಢೀಕರಣವಾಗುತ್ತಿದೆ. ಈ ಆದಾಯದಿಂದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

೨೪ ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಗುಣಮಟ್ಟದ ಕಾಮಗಾರಿ ನಿರ್ವಹಿಸುವಂತೆ ಸೂಚಿಸಿದರು. ಹಾಗೂ ಗ್ರಾಮಸ್ಥರು ಸಹ ಕಾಮಗಾರಿಯ ಕುರಿತು ನಿಗಾವಹಿಸುವ ಮೂಲಕ ಉತ್ತಮ ರಸ್ತೆ, ಚರಂಡಿ ನಿರ್ಮಾಣ ಆಗುವಂತೆ ನೋಡಿಕೊಳ್ಳಬೇಕೆಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಶಿವಕುಮಾರ ನೀಲಗುಂದ, ತಾಲೂಕು ಪಂಚಾಯತ್ ಸದಸ್ಯ ವಿರುಪಾಕ್ಷಗೌಡ ಹಾಗೂ ರುದ್ರಗೌಡ ಪಾಟೀಲ, ಅಶೋಕ ಹೆಬ್ಬಳ್ಳಿ, ಪಿ.ಡಿ.ಓ ಲೋಹಿತ ಸೇರಿದಂತೆ ಇತರರು ಇದ್ದರು.