ಸೈನಿಕ ಶಾಲೆಯ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

Share

ಗದಗ: ನ್ಯಾಶನಲ್ ಟೆಸ್ಟಿಂಗ್ ಏಜನ್ಸಿಯು (ಎನಟಿಎ) ೨೦೨೧-೨೨ನೇ ಶೈಕ್ಷಣಿಕ ವರ್ಷಕ್ಕಾಗಿ ಸೈನಿಕ ಶಾಲೆಗೆ ಪ್ರವೇಶ ಪರೀಕ್ಷೆ ನಡೆಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಡಿಸೆಂಬರ್ ೧೮ ರವರೆಗೆ ವಿಸ್ತರಿಸಲಾಗಿದೆ.

ಅರ್ಹ ಅಭ್ಯರ್ಥಿಗಳು https://aissee.nta.nic.in ವೆಬ್‌ಸೈಟ್ ಮೂಲಕ ಆನ್‌ಲೈನನಲ್ಲಿ ಡಿಸೆಂಬರ್ ೧೮ ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಯನ್ನು www.nta.ac.in ನಲ್ಲಿ ಪಡೆಯಬಹುದು ಎಂದು ಎನ್‌ಟಿಎ ಹಿರಿಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.