ಕೋಟಿ ವೆಚ್ಚದಲ್ಲಿ ಆರೋಗ್ಯ ಕೇಂದ್ರ ನಿರ್ಮಾಣವಾದರೂ ಉದ್ಘಾಟನಾ ಭಾಗ್ಯ ಕಾಣದಾಗಿದೆ ?

Share

ದಾವಣಗೆರೆ, ಮೇ 31: ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡಲು ನಿರ್ಮಿಸಲಾಗಿರುವ ಆರೋಗ್ಯ ಕೇಂದ್ರ ಮೂರು ವರ್ಷಗಳು ಕಳೆದರು ಆರಂಭವಾಗಿಲ್ಲ.

ಜಿಲ್ಲೆಯ ಚನ್ನಗಿರಿ ತಾಲೂಕಿನ ವಡ್ನಾಳ್​ ಗ್ರಾಮದಲ್ಲಿ 50 ಹಾಸಿಗೆಗಳ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೂರು ವರ್ಷಗಳ ಹಿಂದೆಯೇ ನಿರ್ಮಿಸಲಾಗಿದೆ. ಇದರಿಂದ ವಡ್ನಾಳ್, ಪಾಂಡೋಮಟ್ಟಿ, ಬೆಂಕಿಕೆರೆ ಸೇರಿ ಅನೇಕ ಹಳ್ಳಿಗಳಿಗೆ ಅನುಕೂಲವಾಗುತ್ತದೆ.

ಆದರೆ ರಾಜಕೀಯ ತಿಕ್ಕಾಟದಿಂದ ಇದುವರೆಗೂ ಆಸ್ಪತ್ರೆಯಲ್ಲಿ ಸೇವೆ ಆರಂಭವಾಗಿಲ್ಲ ಎಂಬ ಆರೋಪ ಕೇಳಿ ಬಂದಿದೆ. 2016ರಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರಾಗಿತ್ತು. ಸುಮಾರು 1 ಕೋಟಿ 83 ಲಕ್ಷ ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಿಸಲಾಗಿದೆ. ಕೊರೊನಾದಂತಹ ಸಂಕಷ್ಟ ಸಮಯದಲ್ಲಿ ಜನರು ಆಸ್ಪತ್ರೆ, ಬೆಡ್​, ವೈದ್ಯಕೀಯ ಸೌಲಭ್ಯಗಳಿಲ್ಲದೆ ಪರಡಾಟ ನಡೆಸುತ್ತಿದ್ದಾರೆ.

ಆದರೆ ಒಂದು ಕೋಟಿ ರೂಪಾಯಿಗೂ ಅಧಿಕ ಹಣ ಖರ್ಚು ಮಾಡಿ ನಿರ್ಮಿಸಿರುವ ಆಸ್ಪತ್ರೆ ಇಂದಿಗೂ ಕಾರ್ಯಾರಂಭ ಮಾಡದಿರುವ ಬಗ್ಗೆ ಸಾರ್ವಜನಿಕ ವಲಯದಿಂದ ಅಸಮಾಧಾನ ಕೇಳಿ ಬಂದಿದೆ. ಆಸ್ಪತ್ರೆ ಆರಂಭಿಸಿದ್ದರೆ ಕೋವಿಡ್ ಸಂಕಷ್ಟ ಸಮಯದಲ್ಲಿ  ಬಳಸಿಕೊಳ್ಳಬಹುದಿತ್ತು ಎಂದು ಅಭಿಪ್ರಾಯ ಪಟ್ಟಿದ್ದಾರೆ.