ಅಧಿಕಾರಿಗಳನ್ನು ಜೈಲಿಗೆ ಹಾಕುವುದರಿಂದ ಆಮ್ಲಜನಕ ದೊರೆಯುವುದಿಲ್ಲ: ‘ಸುಪ್ರೀಂ ಕೋರ್ಟ್‌’

Share

ದೆಹಲಿ: ‘ಅಧಿಕಾರಿಗಳನ್ನು ಜೈಲಿಗೆ ಹಾಕುವುದರಿಂದ ದೆಹಲಿಗೆ ಆಮ್ಲಜನಕ ದೊರೆಯುವುದಿಲ್ಲ. ಜನರ ಜೀವ ಉಳಿಸುವ ಕ್ರಮಗಳನ್ನು ಖಚಿತಪಡಿಸಿಕೊಳ್ಳುವುದು ಮುಖ್ಯ’ ಎಂದು ಸುಪ್ರೀಂ ಕೋರ್ಟ್‌ ಬುಧವಾರ ಹೇಳಿದೆ.

ನ್ಯಾಯಾಂಗ ನಿಂದನೆ ನೋಟಿಸ್‌ಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ನೀಡಿದ್ದ ಆದೇಶದ ವಿರುದ್ಧ ದೆಹಲಿಗೆ ಮೇ 3 ರಿಂದ ಪ್ರತಿ ದಿನ 700 ಮೆಟ್ರಿಕ್‌ ಟನ್‌ ಆಮ್ಲಜನಕವನ್ನು ಪೂರೈಸಬೇಕು ಎಂದು ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ನೇತೃತ್ವದ ಪೀಠವು ಇದೇ ಸಂದರ್ಭದಲ್ಲಿ ಆದೇಶಿಸಿತು.