ಪಶ್ಚಿಮ ಬಂಗಾಳ ರಾಜ್ಯಪಾಲರಿಗೆ ವರದಿ ಕೇಳಿದ ಕೇಂದ್ರ ಗೃಹ ಸಚಿವಾಲಯ

Share

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ಕುರಿತು ವರದಿ ನೀಡುವಂತೆ ಕೇಂದ್ರ ಗೃಹ ಸಚಿವಾಲಯವು ರಾಜ್ಯಪಾಲ ಜಗದೀಪ್‌ ಧನಖಡ್‌ ಅವರನ್ನು ಕೇಳಿದೆ. ಪ್ರಮುಖವಾಗಿ ಚುನಾವಣೆ ಫಲಿತಾಂಶ ಪ್ರಕಟಗೊಂಡ ಹಿಂಸಾಚಾರಗಳಿಗೆ ಸಂಬಂಧಿಸಿದಂತೆ ವರದಿ ಕೇಳಿದೆಯಂತೆ.

ಶೀಘ್ರವಾಗಿ ಪರಿಸ್ಥಿತಿಯನ್ನು ಅವಲೋಕಿಸಿ ತಮ್ಮ ವರದಿಯನ್ನು ಸಚಿವಾಲಯಕ್ಕೆ ಸಲ್ಲಿಸುವಂತೆ ರಾಜ್ಯಪಾಲರಿಗೆ ತಿಳಿಸಲಾಗಿದೆ. ಚುನಾವಣೆ ಫಲಿತಾಂಶ ನಂತರದ ಹಿಂಸಾಚಾರದ ಬಗ್ಗೆ ತನಿಖೆ ಕೈಗೊಳ್ಳಲು ಹೆಚ್ಚು ಕಾರ್ಯದರ್ಶಿ ದರ್ಜೆಯ ಅಧಿಕಾರಿ ನೇತೃತ್ವದಲ್ಲಿ ನಾಲ್ಕು ಸದಸ್ಯರ ತಂಡವನ್ನು ಕೇಂದ್ರ ಗೃಹ ಸಚಿವಾಲಯವು ರಚಿಸಿದೆ. ಟಿಎಂಸಿ ಬೆಂಬಲಿಗರಿಂದ ಬಿಜೆಪಿ ಕಾರ್ಯಕರ್ತರ ಹತ್ಯೆಯ ಆರೋಪವನ್ನು  ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವು ತಳ್ಳಿ ಹಾಕಿದೆ.