ಮಮತಾಗೆ ಅಭಿನಂದನೆಗಳ ಮಹಾಪೂರ

Share

ಕೋಲ್ಕತಾ: ಪಶ್ಚಿಮ ಬಂಗಾಳ ಚುನಾವಣೆಯ ಫಲಿತಾಂಶ ಬಹುತೇಕ ಮುಗಿಯುತ್ತಾ ಬಂದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಭಾರೀ ಮುನ್ನಡೆ ಸಾಧಿಸಿದ್ದು, ನಿರೀಕ್ಷೆಯಂತೆ ಗೆಲುವಿನತ್ತ ಹೆಜ್ಜೆ ಇಟ್ಟಿದೆ. ಇದರ ಬೆನ್ನಲ್ಲೇ ಮಮತಾ ಬ್ಯಾನರ್ಜಿಗೆ ಎಲ್ಲೆಡೆಯಿಂದ ಅಭಿನಂದನೆಗಳ ಸುರಿಮಳೆಯಾಗುತ್ತಿದೆ.

ಈ ನಡುವೆ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಅಖಿಲೇಶ್‌ಶ್ ಯಾದವ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಪರೋಕ್ಷವಾಗಿ ಟಾಂಗ್‌ ಕೊಟ್ಟು ಟ್ವೀಟ್‌ ಮಾಡಿದ್ದಾರೆ.