ರಾಷ್ಟ್ರೀಯ ತನಿಖಾ ದಳದಲ್ಲಿ ಉದ್ಯೋಗವಕಾಶ

Share


ನವ ದೆಹಲಿ: ರಾಷ್ಟ್ರೀಯ ತನಿಖಾ ದಳ ಡೆಪ್ಯೂಟೇಷನ್ ಆಧಾರದ ಮೇಲೆ ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್ ಹಾಗೂ ಸಹಾಯಕ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಇನ್ಸ್ ಪೆಕ್ಟರ್ 29, ಸಬ್ ಇನ್ಸ್ ಪೆಕ್ಟರ್ 31, ಸಹಾಯಕ ಸಬ್ ಇನ್ಸ್ ಪೆಕ್ಟರ್ 29 ಹುದ್ದೆಗಳಿಗೆ ಎನ್‍ಐಎ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ನವೆಂಬರ್ 8 ಕೊನೆಯ ದಿನವಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿವಿಯಿಂದ ಸ್ನಾತಕೋತ್ತರ ಪದವಿ ಹೊಂದಿರಬೇಕು. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಇರಲಿದ್ದು, ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.nia.gov.in ವೆಬ್ ಸೈಟ್‍ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.