ಕೋವಿಡ್‌ ಹೆಚ್ಚಳ: ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ‌ ಮುಂದೂಡಿಕೆ

Share

ಬೆಂಗಳೂರು: ಇದೇ 28ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ‌ ನಿರ್ಧಾರ ತೆಗೆದುಕೊಳ್ಳಲಾಗಿದೆ.

ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಪೋಷಕರು ಮತ್ತು ಅಧಿಕಾರಿಗಳ ಜೊತೆ  ಚರ್ಚೆ ನಡೆಸಿದ ಬಳಿಕ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ ಮುಂದುವರೆಸಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.