ಜೂನ್ 28 ರಿಂದ 2 ದಿನ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ

Share

ಬೆಂಗಳೂರು, ಜೂನ 25: ರಾಜ್ಯದಲ್ಲಿ ಜೂನ 28ರಿಂದ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ 28 ರಿಂದ ಎರಡು ದಿನಗಳ ಕಾಲ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ರಾಜ್ಯದಲ್ಲಿ ಇಳಿಕೆಯಾಗಿದ್ದ ಮಳೆ ಇದೀಗ ಮತ್ತೆ ಅಬ್ಬರಿಸಲಿದೆ. ಕರಾವಳಿಯಲ್ಲಿ  ಸಹ ಮಳೆಯ ಆರ್ಭಟ ಶುರುವಾಗಲಿದೆ.

ಜೂನ 28ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿಯೂ ಮಳೆಯ ಆರ್ಭಟ ಹೆಚ್ಚಾಗಲಿದ್ದು, ನಾಳೆಯಿಂದ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.