ಪಿಯುಸಿ ರಿಪೀಟರ್ಸ್​ 76 ಸಾವಿರ ವಿದ್ಯಾರ್ಥಿಗಳು ಪಾಸ್

Share

ಬೆಂಗಳೂರು, ಜುಲೈ 5: ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು 2020-21 ರ ಸಾಲಿನ ದ್ವಿತೀಯ ಪಿಯುಸಿ ರಿಪೀಟರ್ಸ್​ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್ ನೀಡಿದೆ. ಮಹತ್ವದ ನಿರ್ಧಾರ ತೆಗೆದುಕೊಂಡಿರುವ ರಾಜ್ಯ ಸರ್ಕಾರ ಎಲ್ಲಾ 76 ಸಾವಿರ ವಿದ್ಯಾರ್ಥಿಗಳನ್ನು ಪಾಸ್ ಮಾಡುವುದಾಗಿ ಹೈಕೋರ್ಟ್​ಗೆ ಮಾಹಿತಿ ನೀಡಿದೆ.

ಎಲ್ಲಾ ರಿಪೀಟರ್ಸ್ ವಿದ್ಯಾರ್ಥಿಗಳಿಗೆ ತಲಾ 35 ಅಂಕ ನೀಡುವುದರ ಮೂಲಕ ಪಾಸ್ ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿದ್ದು, ರಿಪೀಟರ್ಸ್​ಗೆ ರಿಲೀಫ್ ಸಿಕ್ಕಂತಾಗಿದೆ. ಆದ್ರೆ, ಇದ್ರಲ್ಲೂ ಪ್ರತಿಭಾವಂತ ವಿದ್ಯಾರ್ಥಿಗಳು ಅನಿವಾರ್ಯ ಕಾರಣದಿಂದ ಫೇಲ್ ಆಗಿ, ಮತ್ತೆ ಉತ್ತಮ ಅಂಕ ಪಡೆಯುವ ನಿಟ್ಟಿನಲ್ಲಿ ಪರೀಕ್ಷೆ ಬರೆಯಬೇಕು ಎಂದುಕೊಂಡವರಿಗೆ ರಾಜ್ಯ ಸರ್ಕಾರ ಏನು ಮಾಡುತ್ತೆ? ಅನ್ನೋದು ಇನ್ನೂ ಸ್ಪಷ್ಟವಾಗಬೇಕಿದೆ.