ರಾಜ್ಯದಲ್ಲಿ ಡಿ. 22, 27ರಂದು ಎರಡು ಹಂತದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ

Share

ಬೆಂಗಳೂರು: ರಾಜ್ಯದ 5,762 ಗ್ರಾಮ ಪಂಚಾಯಿತಿಗಳಿಗೆ ಡಿ. 22, 27ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಬಸವರಾಜ್‌ ತಿಳಿಸಿದರು.

ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ಮೊದಲ ಹಂತದ ಮತದಾನ ಡಿ. 22ರಂದು ಮತ್ತು ಎರಡನೇ ಹಂತದ ಮತದಾನ ಡಿ. 27ರಂದು ಮತದಾನ ನಡೆಯಲಿದೆ. ಎರಡೂ ಹಂತಗಳಲ್ಲಿ ನಡೆದ ಮತದಾನದ ಮತಗಳ ಎಣಿಕೆ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಡಿ 30ರಂದು ನಡೆಯಲಿದೆ.

ಪ್ರತಿ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ತಾಲ್ಲೂಕುಗಳನ್ನು ವಿಂಗಡಿಸಲಾಗಿದೆ. ಮೊದಲ ಹಂತದಲ್ಲಿ 113 ತಾಲ್ಲೂಕುಗಳ 2,930 ಗ್ರಾಮ ಪಂಚಾಯಿತಿಗಳೂ ಹಾಗೂ ಎರಡನೇ ಹಂತದಲ್ಲಿ 113 ತಾಲ್ಲೂಕುಗಳ 2,832 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ ಎಂದು ಅವರು ತಿಳಿಸಿದರು.