ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ: ಪ್ರಯಾಣಿಕರ ಪರದಾಟ

Share


ಬೆಂಗಳೂರು: ವಿವಿಧ ಬೇಡಿಕೆಗಳನ್ನು ಸರಕಾರದ ಮುಂದಿಟ್ಟು ರಾಜ್ಯಾದ್ಯಂತ ಸಾರಿಗೆ ನೌಕರರು ಮಾಡುತ್ತಿರುವ ಮುಷ್ಕರ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದ್ದು , ಈ ನಡುವೆ ಬಸ್‌ಗಾಗಿ ಪ್ರಯಾಣಿಕರು ತಮ್ಮ ಪ್ರಯಾಣಕ್ಕೆ ಕಷ್ಟಪಡಬೇಕಾದ ಸನ್ನಿವೇಶ ನಿರ್ಮಾಣವಾಗಿದೆ.

ಗುತ್ತಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣನೆ ಮಾಡುವಂತಹದ್ದು, ಸಂಬಳ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಸಾರಿಗೆ ನೌಕರರು ತಮ್ಮ ಬೇಡಿಕೆಯನ್ನು ರಾಜ್ಯ ಸರ್ಕಾರದ ಮುಂದೆ ಇಟ್ಟಿದ್ದು, ಬೇಡಿಕೆ ಈಡೇರುವ ತನಕ ತಮ್ಮ ಪ್ರತಿಭಟನೆ ವಾಪಸ್ಸು ತೆಗೆದುಕೊಳ್ಳುವುದಿಲ್ಲ ಎಂದು ನಿರ್ಣಯಿಸಿ ಮುಷ್ಕರಕ್ಕೆ ಮುಂದಾಗಿದ್ದರಿಂದ ರಾಜ್ಯಾದ್ಯಂತ ಪ್ರಯಾಣಿಕರು ಪ್ರಯಾಸಪಡುತ್ತಿದ್ದಾರೆ.