ಸೆ. 18, 19ರಂದು SDA ಪರೀಕ್ಷೆ; ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ KPSC

Share

ಬೆಂಗಳೂರು,ಜೂ 30: ಮಾರ್ಚ್​ನಲ್ಲಿ ಮುಂದೂಡಲ್ಪಟ್ಟಿದ್ದ ದ್ವಿತೀಯ ದರ್ಜೆ ಸಹಾಯಕರ (ಎಸ್​ಡಿಎ) ಪರೀಕ್ಷೆಯನ್ನು ಸೆಪ್ಟೆಂಬರ್​ನಲ್ಲಿ ಮರು ನಿಗದಿಸಿ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್​ಸಿ) ಪರೀಕ್ಷೆ ನಡೆಸಲು ಮುಂದಾಗಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಕೆಪಿಎಸ್​ಸಿ ಕಾರ್ಯದರ್ಶಿ ಜಿ ಸತ್ಯವತಿ, ಪರಿಷ್ಕೃತ ವೇಳಾಪಟ್ಟಿಯಂತೆ ಸೆಪ್ಟೆಂಬರ್​ 18 ಮತ್ತು 19 ರಂದು ರಾಜ್ಯಾದ್ಯಂತ ಎಸ್​ಡಿಎ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಸೆ. 18 ರಂದು ಕನ್ನಡ ಭಾಷಾ ಪರೀಕ್ಷೆಯನ್ನು ಸೆ .19ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.