SSLC ಪರೀಕ್ಷೆಗೆ ಪೂರ್ವ ಸಿದ್ಧತೆ: ಶಿಕ್ಷಕರಿಗೆ ಲಸಿಕೆ

Share

ಬೆಂಗಳೂರು, ಜೂನ 24: ರಾಜ್ಯದಲ್ಲಿ ಎಸ್​ಎಸ್​​ಎಲ್​​ಸಿ ಪರೀಕ್ಷೆ ನಡೆಸುವುದಕ್ಕೆ ಸರ್ಕಾರ ಸಕಲ ಸಿದ್ದತೆ ನಡೆಯುತ್ತಿದ್ದು,ಜೂಲೈ ಮೂರನೇ ವಾರದಲ್ಲಿ ಪರೀಕ್ಷೆ ನಡೆಯಲಿದೆ.

ಪರೀಕ್ಷಾ ಪ್ರಕ್ರಿಯೆಗಳಲ್ಲಿ ಭಾಗಿಯಾಗುವ ಶಿಕ್ಷಕರು, ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಲಸಿಕೆ ನೀಡಿ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಕಾರಣದಿಂದ 6000 ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯಲ್ಲಿ ಭಾಗಿಯಾಗಲಿರುವ ಸಿಬ್ಬಂದಿ, ಅಧಿಕಾರಿಗಳು, ಶಿಕ್ಷಕರ ಪಟ್ಟಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಆದ್ಯತೆಯಲ್ಲಿ ಲಸಿಕೆ ನೀಡುವಂತೆ ಸೂಚನೆ ನೀಡಿದ್ದಾರೆ.

ಇನ್ನು ಬೆಂಗಳೂರಿನಲ್ಲಿ ಶಿಕ್ಷಕರನ್ನ ಕೋವಿಡ್ ಕರ್ತವ್ಯದಿಂದ ತಕ್ಷಣವೇ ಬಿಡುಗಡೆ ಮಾಡುವಂತೆ ಬಿಬಿಎಂಪಿ ಕಮಿಷನರ್​ಗೆ ಸಚಿವರು ಸೂಚನೆ ನೀಡಿದ್ದಾರೆ.