SSLC ಪರೀಕ್ಷೆ ಗೊಂದಲ ಸೃಷ್ಟಿಸುವುದು ಅನಗತ್ಯ – ಸಿಎಂ ಬಿಎಸ್​​ವೈ

Share

ಬೆಂಗಳೂರು, ಜೂನ 29: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ದಿನಾಂಕ ನಿಗದಿ ಮಾಡಿರುವ ವಿಚಾರವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಶಿಕ್ಷಣ ಸಚಿವರು ಪರೀಕ್ಷೆ ನಡೆಸೋ ಬಗ್ಗೆ ಆರೋಗ್ಯ ಇಲಾಖೆಯೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ ಅಂತಾ ನಿನ್ನೆ ಸುಧಾಕರ್ ಹೇಳಿದ್ದರು. ಈ ಕುರಿತು ಇಂದು ಟ್ವೀಟ್​​ ಮಾಡಿರುವ ಯಡಿಯೂರಪ್ಪ, ಶಿಕ್ಷಣ ಸಚಿವ ಸುರೇಶ್​​ ಕುಮಾರ್​ ಅವರು ಪೂರ್ವಭಾವಿಯಾಗಿ ನನ್ನೊಂದಿಗೆ ಚರ್ಚಿಸಿ, SSLC ಪರೀಕ್ಷೆಗೆ ದಿನಾಂಕ ನಿಗದಿಪಡಿಸುವ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದ ನಂತರವೇ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ. ಈ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ ಎಂದು ಯಡಿಯೂರಪ್ಪ     ಹೇಳಿದ್ದಾರೆ.