SSLC ಪರೀಕ್ಷೆ ವಿದ್ಯಾರ್ಥಿಗಳಿಗೆ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ

Share

ಬೆಂಗಳೂರು, ಜುಲೈ 13: ಎಸ್​ಎಸ್​ಎಲ್​ಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಜುಲೈ 19 ಹಾಗೂ 22ರಂದು ಉಚಿತ ಬಸ್​ ಪ್ರಯಾಣ ಮಾಡಲು ಅನುಮತಿ ನೀಡಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಈ ಆದೇಶ ಹೊರ ಬಂದಿದೆ. ವಿದ್ಯಾರ್ಥಿಗಳು ತಮ್ಮ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹೋಗಲು ಮತ್ತು ವಾಪಸ್ ಬರಲು ಅನುಮತಿ ನೀಡಲಾಗಿದೆ. ವಿದ್ಯಾರ್ಥಿಗಳು ಬಸ್‌ನಲ್ಲಿ ಪ್ರಯಾಣ ಮಾಡುವಾಗ ಕಡ್ಡಾಯವಾಗಿ ಪರೀಕ್ಷಾ ಪ್ರವೇಶ ಪತ್ರ ಹೊಂದಿರಬೇಕು ಎಂದು ಸೂಚನೆ ನೀಡಲಾಗಿದೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿಗಮವು, ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೆಎಸ್ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಮಾಹಿತಿ ನೀಡಿದ್ದಾರೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣವನ್ನು ಅನುಮತಿಸಲು ನಿಗಮದ ಎಲ್ಲಾ ಚಾಲಕ-ನಿರ್ವಾಹಕರಿಗೆ ಸೂಚಿಸಲಾಗಿದೆ ಎಂದರು.