SSLC ವಿದ್ಯಾರ್ಥಿಗಳಿಗೆ ಪರೀಕ್ಷೆ ರದ್ದು ಮಾಡಲ್ಲ- ಸುರೇಶ್ ಕುಮಾರ್

Share

ಬೆಂಗಳೂರು, ಜೂನ್ 4: ಕೇಂದ್ರ ಸರ್ಕಾರ ಸಿಬಿಎಸ್​ಇ 12 ನೇ ತರಗತಿ ಪರೀಕ್ಷೆಗಳನ್ನ ರದ್ದು ಮಾಡಿದ ಬೆನ್ನಲ್ಲೇ ಇಂದು  ಶಿಕ್ಷಣ ಸಚಿವ ಸುರೇಶ್ ಕುಮಾರ್. ಎಸ್​ಎಸ್​ಎಲ್​ಸಿ ಪರೀಕ್ಷೆಗಳು ಎರಡು ಹಂತಗಳಲ್ಲಿ ನಡೆಯಲಿದೆ ಎಂದು ಹೇಳಿದರು. ಅಲ್ಲದೇ ಜುಲೈ 3 ನೇ ವಾರದಲ್ಲಿ ಪರೀಕ್ಷೆ ನಡೆಯಲಿದೆ ಎಂದರು.

ಪರೀಕ್ಷೆಯಲ್ಲಿ ಬಹುಆಯ್ಕೆಯ ಪ್ರಶ್ನೆಗಳಿದ್ದು, ನೇರ ಮತ್ತು ಸರಳವಾಗಿರುತ್ತವೆ. ಪ್ರತಿ ವಿಷಯಕ್ಕೆ 40 ಅಂಕಗಳಿರುತ್ತವೆ. ಅಂದರೆ, ಒಂದು ಪತ್ರಿಕೆ 120 ಅಂಕಗಳಿಗೆ ಇದ್ದು, ಮೂರು ಗಂಟೆ ಸಮಯ ನೀಡಲಾಗುತ್ತದೆ’ ಎಂದರು.

ವಿದ್ಯಾರ್ಥಿಗಳು ಪಿಯುಸಿಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗ ಸೇರಿದಂತೆ ಯಾವುದೇ ಕೋರ್ಸ್‌ ತೆಗೆದುಕೊಳ್ಳಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಪರೀಕ್ಷೆ ನಡೆಸಲಾಗುತ್ತಿದೆ. ಯಾರನ್ನೇ ಆಗಲಿ ಅನುತ್ತೀರ್ಣಗೊಳಿಸುವ ಉದ್ದೇಶವಿಲ್ಲ. ಎ, ಎ+ ಗ್ರೇಡ್ ನೀಡಲಾಗುತ್ತದೆ’ ಎಂದರು. ‘ಕೋವಿಡ್ ಕಾರಣದಿಂದ ಗೈರಾಗಿದ್ದರೆ ಅಂತಹ ಮಕ್ಕಳಿಗೆ ಮಾತ್ರ ಪೂರಕ ಪರೀಕ್ಷೆ ನಡೆಸಲಾಗುತ್ತದೆ’ ಎಂದೂ ತಿಳಿಸಿದರು.