ಹಾಸ್ಟೆಲ್​​​ ಕಟ್ಟಡದ ಮೇಲಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿನಿ ಸಾವು

Share

ಹಾವೇರಿ: ಹಾಸ್ಟೆಲ್ ಕಟ್ಟಡದ ಮೇಲಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿ‌ನಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ರಾಣೆಬೆನ್ನೂರು ನಗರದ ಬಿಸಿಎಂ ಹಾಸ್ಟೆಲ್‌ನಲ್ಲಿ ಶನಿವಾರ ಸಂಭವಿಸಿದೆ.

ಕಾವ್ಯಾ ಬೆನ್ನೂರ(16) ಮೃತ ವಿದ್ಯಾರ್ಥಿನಿ. ಕಾವ್ಯ ನಗರದ ರಾಜರಾಜೇಶ್ವರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಶನಿವಾರ ಪರೀಕ್ಷೆ ಇದ್ದ ಕಾರಣ ಮುಂಜಾನೆ ಬೇಗನೆ ಎದ್ದು ಶೌಚಾಲಯಕ್ಕೆ ಹೋದಾಗ ಆಯತಪ್ಪಿ ಬಿದ್ದಿದ್ದಾಳೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ರಾಣೆಬೆನ್ನೂರು ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.