ನೀರಿನ ಹೊಂಡದಲ್ಲಿ ಬಿದ್ದು ಬಾಲಕ ಸಾವು

Share

ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡ ಗ್ರಾಮದ ನೀರಿನ ಹೊಂಡದಲ್ಲಿ ಬಿದ್ದು ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಮಂಗಳವಾರ ಸಂಭವಿಸಿದೆ‌.

ಮೃತ ಬಾಲಕನನ್ನು ಅದೇ ಗ್ರಾಮದ ಸಚಿನ ಗೋದಾವಿ (10) ಎಂದು ಗುರುತಿಸಲಾಗಿದೆ. ಘಟನೆ ಕುರಿತು ಟ್ವೀಟ್ ಮಾಡಿರುವ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಘಟನೆ ಬಗ್ಗೆ ತಿಳಿದು ಅತ್ಯಂತ ದುಖಃವಾಗಿದೆ‌. ಪೋಲೀಸ ಇಲಾಖೆಗೆ ಸೂಕ್ತ ತನಿಖೆ ಮಾಡಲು ಸೂಚಿಸಿರುತ್ತೇನೆ. ಅದೇ ರೀತಿಯಾಗಿ ನೀರಾವರಿ ಇಲಾಖೆಗೆ ಮುಂದಿನ ದಿನಗಳಲ್ಲಿ ಈ ರೀತಿಯ ದುರ್ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

ಮೃತ ಬಾಲಕನ ಪೋಷಕರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ. 5 ಲಕ್ಷ ಪರಿಹಾರವನ್ನು ನೀಡಲಾಗುವುದು. ಮೃತ ಬಾಲಕನ ಕುಟುಂಬದವರಿಗೆ ದುಖಃವನ್ನು ಭರಿಸುವಂತಹ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.