ಕೋವಿಡ್-19 ಪರಿಹಾರ ನಿಧಿಗೆ ದೇಣಿಗೆ

Share

ಸವಣೂರ: ಕೋವಿಡ್- 19 ಮುಖ್ಯಮಂತ್ರಿ ಪರಿಹಾರ ನಿಧಿಗೆ ತಾಲೂಕಿನ ಕೃಷಿ ಪರಿಕರಗಳ ಮಾರಾಟ ಸಂಘದ ವತಿಯಿಂದ ಅಧ್ಯಕ್ಷ ಮೋಹನ ಮೆಣಸಿನಕಾಯಿ 1.39 ಲಕ್ಷ ರೂಪಗಳನ್ನು ಸೋಮವಾರ ದೇಣಿಗೆ ನೀಡಿದರು.

ಜಿಲ್ಲಾ ಜಂಟಿ ಕೃಷಿ ನಿರ್ದೇಶಕರಿಗೆ ಚೆಕ್ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್-19 ಕೊರೊನಾ ಸೋಂಕು ಹೊಂದಿರುವ ಜನರ ವೈದ್ಯೋಪಚಾರಕ್ಕಾಗಿ ದೇಣಿಗೆ ಸಂಗ್ರಹಿಸುತ್ತಿರುವ ರಾಜ್ಯ ಸರ್ಕಾಕ್ಕೆ ತಾಲೂಕಿನ ಕೃಷಿ ಪರಿಕರಗಳ ಮಾರಾಟ ಸಂಘದ ವತಿಯಿಂದ ದೇಣಿಗೆ ನೀಡುವ ಮೂಲಕ ಅಳಿಲು ಸೇವೆ ಸಲ್ಲಿಸುತ್ತಿದ್ದು, ರಾಜ್ಯದಲ್ಲಿ ದಿನೆ-ದಿನೆ ಸೋಂಕು ಉಲ್ಭಣಗೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಜನರು ಸರ್ಕಾರದ ನಿರ್ದೇಶನದಲ್ಲಿ ಇನ್ನಷ್ಟು ದಿನಗಳ ಕಾಲ ಮಾಸ್ಕ್ ಧರಿಸಿಕೊಂಡು ಸಾಮಾಜಿಕ ಅಂತರವನ್ನು ಕಾಯ್ದುಕೊಂಡಲ್ಲಿ ಈ ಸೋಂಕನ್ನು ತಡೆಗಟ್ಟಲು ಸಾಧ್ಯವಾಗಲಿದೆ. ಪ್ರಧಾನಿ ಮೋದಿ ಅವರು ದೇಶದ ಜನರ ಆರೋಗ್ಯ ಮತ್ತು ಪ್ರಾಣ ಹಾನಿ ತಡೆಗಟ್ಟಲು ಲಾಕಡೌನ್ ಘೋಷಿಸಿದ್ದು, ಅನ್ಯ ದೇಶಗಳಿಗೆ ಮಾದರಿಯಾಗಿದೆ ಎಂದರು.

ಈ ಸಂರ್ಭದಲ್ಲಿ ತಾಲೂಕಿನ ಕೃಷಿ ಪರಿಕರಗಳ ಮಾರಾಟ ಸಂಘದ ಪದಾಧಿಕಾರಿಗಳು ಇದ್ದರು.

ವರದಿ: ನಿಂಗನಗೌಡ ಪಾಟೀಲ, ಸವಣೂರು