ವಿವಿಧ ಸೌಲಭ್ಯ ಪಡೆಯಲು ರೈತರಿಂದ ಅರ್ಜಿ ಆಹ್ವಾನ

Share

ಹಾವೇರಿ: ಸವಣೂರು ತಾಲೂಕು ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ, ಸಮಗ್ರ ರೋಗ ಮತ್ತು ಕೀಟಗಳ ನಿಯಂತ್ರಣ ಯೋಜನೆ, ಕೃಷಿಭಾಗ್ಯ ಯಫಜನೆ, ನೀರಿನ ಟ್ಯಾಂಕರ್ ಖರೀದಿಗೆ ಸಹಾಯಧನ ಹಾಗೂ ಜಿಲ್ಲಾ ಪಂಚಾಯತ್ ಮತ್ತು ಕೇಂದ್ರ ಪುರಸ್ಕøತ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ, MGNREGA ಯೋಜನೆಯಡಿ ಬಹು ವಾರ್ಷಿಕ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ(ಮಾವು, ಪೇರಲ, ದಾಳಿಂಬೆ, ತೆಂಗು, ಚಿಕ್ಕು ಮತ್ತು ಇತರೆ) ಸೇರಿದಂತೆ ಇಲಾಖೆಯಿಂದ 2019-20ನೇ ಸಾಲಿನಲ್ಲಿ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಫಲಾನುಭವಿಗಳ ಆಯ್ಕೆಮಾಡಲಾಗುವುದು.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಹಣ್ಣಿನ ಮತ್ತು ಹೂವಿನ ಬೆಳೆಗಳ ಪ್ರದೇಶ ವಿಸ್ತರಣೆ, ಹಸಿರುಮನೆ, ನೆರಳು ಪರದೆ, ಕೃಷಿಹೊಂಡ, ಸಮಗ್ರ ರೋಗ ಮತ್ತು ಕೀಟಗಳ ನಿಯಂತ್ರಣ, ಮಿನಿ ಟ್ರ್ಯಾಕ್ಟರ್ ಘಟಕಗಳಿಗೆ ಸಹಾಯಧನ ಪಡೆಯಲು ಅವಕಾಶವಿರುತ್ತದೆ.
ಯೋಜನೆ ಲಾಭಪಡೆಯಲು ರೈತರು ಸ್ವಂತ ಜಮೀನು ಮತ್ತು ನೀರಾವರಿ ಸೌಲಭ್ಯ ಹೊಂದಿರಬೇಕು. ಆಧಾರ್ ಕಾರ್ಡ್, ಗುರುತಿನ ಚೀಟಿ(ವೋಟರ್ ಐಡಿ), ರಾಷ್ಟ್ರೀಕೃತ ಬ್ಯಾಂಕ್‍ಗಳ ಪಾಸ್‍ಬುಕ್‍ಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ಕೈಬರಹದಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು ಹಾಗೂ ಮೊಬೈಲ್ ನಂಬರ್‍ಗಳನ್ನು ತಪ್ಪದೇ ನಮೂದಿಸಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ದಿನಾಂಕ:15-06-2019ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ತೋಟಗಾರಿಕೆ ಅಧಿಕಾರಿ, ರೈತ ಸಂಪರ್ಕ ಕೇಂದ್ರಗಳು ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿ.ಪಂ.)ಸವಣೂರು ಕಚೇರಿಯಲ್ಲಿ ಅಥವಾ ದೂರವಾಣಿ ಸಂಖ್ಯೆ:08378-241546ನ್ನು ಸಂಪಕಿಸಬಹುದು ಎಂದು ಸವಣೂರು ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.