ಉದ್ಯಮ ಸಂತೆ ಜ.28 ರಿಂದ

Share

ಹಾವೇರಿ: ದೇಶಪಾಂಡೆ ಫೌಂಡೇಶನ್ ಸಣ್ಣ ಉದ್ಯಮಿದಾರರ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಸಣ್ಣ ಹಾಗೂ ಮಧ್ಯಮ ವರ್ಗದ ಉದ್ಯಮಗಳಿಗೆ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ನಗರದ ಜಿಲ್ಲಾ ಗುರುಭವನದಲ್ಲಿ ಇದೇ ಜ.28 ರಿಂದ ಜ.31 ರವೆಗೆ ಉದ್ಯಮ ಸಂತೆ ಆಯೋಜಿಸಲಾಗಿದೆ ಎಂದು ದೇಶಪಾಂಡೆ ಫೌಂಡೇಶನ್ ಜಿಲ್ಲಾ ಕಾರ್ಯಕ್ರಮ ಮೇಲ್ವಿಚಾರಕ ಶಿವಾನಂದ ಸೋಮಣ್ಣವರ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಯಮ ಸಂತೆಯಲ್ಲಿ ಸೀರೆಗಳು, ಉಡುಪುಗಳು, ಗೃಹ ಅಂಲಕಾರಿಕ ವಸ್ತುಗಳು ಸೇರಿದಂತೆ ವಿವಿಧ ಬಗೆಯ ತಿಂಡಿಗಳು ಮತ್ತು ಕರಕುಶಲ ವಸ್ತುಗಳನ್ನು ಪ್ರದರ್ಶನ ಮತ್ತು ಮಾರಾಟ ಮಾಡಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ತಮ್ಮ ವಸ್ತುಗಳನ್ನು ಮಾರಾಟ ಮಾಡಲು ಬಯಸುವ ಇತರೇ ಸಣ್ಣ ಉದ್ದಿಮೆದಾರರು ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಪವಿತ್ರಾ ಹಿರೇಮಠ ಮಾತನಾಡಿ, ಉದ್ಯಮ ಸಂತೆಯನ್ನು ಸಣ್ಣ ಉದ್ಯಮಿದಾರರಿಗೆ ಮಾರುಕಟ್ಟೆಯನ್ನು ಒದಗಿಸುವ ಉದ್ದೇಶದಿಂದ ಆಯೋಜನೆ ಮಾಡಲಾಗಿದೆ. ಈ ಉದ್ಯಮ ಸಂತೆಯಲ್ಲಿ ಸಣ್ಣ ಉದ್ದಿಮೆದಾರರು ನೇರವಾಗಿ ಗ್ರಾಹಕರನ್ನು ಸಂಪರ್ಕಿಸುವ ಮೂಲಕ ತಮ್ಮ ವಸ್ತುಗಳನ್ನು ಮಾರಾಟ ಮಾಡುತ್ತಾರೆ. ಸಂಸ್ಥೆ ಧಾರವಾಡ, ಗದಗ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ 90 ಕ್ಕೂ ಅಧಿಕ ಸಂತೆಗಳನ್ನು ಆಯೋಜನೆ ಮಾಡುವ ಮೂಲಕ ಸಣ್ಣ ಉದ್ಯಮಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುತ್ತಿದೆ ಎಂದರು.

ಹೆಚ್ಚಿನ ಮಾಹಿತಿಗಾಗಿ 9741525646, 9900035218 ಅಥವಾ www.Deshpande Foundation.org ಸಂಪರ್ಕಿಸಬಹುದು.