ಕೆವಿಜಿ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಆತ್ಮಹತ್ಯೆಗೆ ಶರಣು

Share

ಹಾವೇರಿ: ತಾಲ್ಲೂಕಿನ ಗುತ್ತಲದ ಚಿದಂಬರ ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನ ಅಸಿಸ್ಟೆಂಟ್ ಮ್ಯಾನೇಜರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ.

ಆಶುತೋಷ ನರುಕ(28) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ. ಪ್ರಸ್ತುತ ಗದಗ ಜಿಲ್ಲೆ ಶಿರಹಟ್ಟಿ ತಾಲೂಕ ಹೊಳೆ ಇಟಗಿಯ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕಾರ್ಯನಿರ್ವಾಹಿಸುತ್ತಿದ್ದ ಆಶುತೋಷ ಮೂಲತಃ ರಾಜಸ್ಥಾನ ಮೂಲದವರಾಗಿದ್ದು ಅವರ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.