ಜುಲೈ 26 ರಂದು ವಿದ್ಯಾರ್ಥಿ ಒಕ್ಕೂಟ ಉದ್ಘಾಟನೆ

Share

ಹಾವೇರಿ: ನಗರದ ಹೊಸಮಠ ಬಸವೇಶ್ವರ ಸಮುದಾಯ ಭವನದಲ್ಲಿ ಜುಲೈ 26 ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಜಗದ್ಗುರು ಮಲ್ಲಿಕಾರ್ಜುನ ಮುರುಘರಾಜೇಂದ್ರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ 2019-20 ನೇ ಸಾಲಿನ ವಿದ್ಯಾರ್ಥಿ ಒಕ್ಕೂಟ ಹಾಗೂ ಸ್ಕೌಟ್ಸ್ & ಗೈಡ್ಸ್ ನ ಉದ್ಘಾಟನಾ ಸಮಾರಂಭ ಜರುಗಲಿದೆ.

ಹೊಸಮಠದ ಬಸವಶಾಂತಲಿಂಗ ಶ್ರೀ ಸಾನಿಧ್ಯದಲ್ಲಿ ಜರಗುವ ಸಮಾರಂಭವನ್ನು ಹಾವೇರಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಪಿ.ಪೀರಜಾದೆ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಕರ್ನಾಟಕ ಆಚೀವರ್ಸ್ ಬುಕ್ ಆಫ್ ರೆಕಾರ್ಡ್ ನ ಅಧ್ಯಕ್ಷೆ ಡಾ\ ಅಂಬಿಕಾ ಹಂಚಾಟೆ, ಹಾವೇರಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಪ್ರೋ. ಬಿ.ಟಿ.ಲಮಾಣಿ, ಸ್ಥಳೀಯ ಆಡಳಿತ ಸಲಹಾ ಸಮಿತಿ ಸದಸ್ಯರಾದ ನಾಗೇಂದ್ರ ಕಟಕೋಳ, ರಾಜೇಂದ್ರ ಸಜ್ಜನ ಆಗಮಿಸಲ್ಲಿದ್ದಾರೆ ಎಂದು ಕಾಲೇಜು ಪ್ರಾಚಾರ್ಯ ಪಿ.ಬಿ.ವಿಜಯಕುಮಾರ್ ತಿಳಿಸಿದ್ದಾರೆ.