ಡಿವೈಎಸ್ಪಿ ವಿ.ಲಕ್ಷ್ಮಿ ಪ್ರಕರಣ ಸೂಕ್ತ ತನಿಖೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

Share

ಹಾವೇರಿ: ಸಿಐಡಿ ವಿಭಾಗದ ಮಹಿಳಾ ಡಿವೈಎಸ್ಪಿ ವಿ. ಲಕ್ಷ್ಮಿ ಸಾವಿನ ಪ್ರಕರಣದ ಸತ್ಯಾಸತ್ಯತೆ ಅರಿಯಲು ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ ಎಂದು ಪೊಲೀಸ್‌ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದೇನೆ. ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಮನೋಸ್ಥೈರ್ಯ ತುಂಬಲು ನಿರಂತರವಾಗಿ ಕಾರ್ಯಕ್ರಮಗಳನ್ನು ಇಲಾಖೆ ವತಿಯಿಂದ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್‌ ಸಿಬ್ಬಂದಿಗೆ ವೈಯಕ್ತಿಕ ಸಮಸ್ಯೆಗಳಿದ್ದರೂ ಬಗೆಹರಿಸಲು ಇಲಾಖೆಯಿಂದ ನೆರವು ನೀಡಲಾಗುವುದು. ಎಂದರು.

ಆರ್.ಎನ್.ಎಸ್. ಶಿಕ್ಷಣ ಮತ್ತು ಉದ್ಯಮ ಸಮೂಹಗಳ ಸ್ಥಾಪಕ ಆರ್.ಎನ್. ಶೆಟ್ಟಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಸಚಿವ ಬೊಮ್ಮಾಯಿ ಆರ್.ಎನ್. ಶೆಟ್ಟಿ ಅವರು ರಾಜ್ಯ ದೊಡ್ಡಮಟ್ಟದ ದಾನಿಯನ್ನು ಕಳೆದುಕೊಂಡಿದೆ ಎಂದರು.