ನಗರಸಭೆ ನೂತನ ಕಟ್ಟಡದ ಉದ್ಘಾಟನೆ

Share

ಹಾವೇರಿ: ಐದು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ನಗರಸಭೆಯ ನೂತನ ಕಟ್ಟಡವನ್ನು ಶುಕ್ರವಾರ ಶಾಸಕ ನೆಹರು ಓಲೇಕಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಬಹಳದಿನಗಳಿಂದ ನೆನೆಗುದಿಗೆ ಬಿದ್ದಿರುವ ವೈದ್ಯಕೀಯ ಕಾಲೇಜಿಗೆ ಅಗತ್ಯವಾದ ಅನುದಾನವನ್ನು ಒದಗಿಸಿ ಆರಂಭಿಸಲಾಗುವುದು ಎಂದು ತಿಳಿಸಿದರು.
ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಆರ್.ವಾಸಣ್ಣ, ಪೌರಾಯುಕ್ತ ಬಸವರಾಜ ಜಿಡ್ಡಿ ಹಾಗೂ ನಗರಸಭೆಯ ಸದಸ್ಯರು ಇದ್ದರು.