ಬೀದಿ ಬದಿ ವ್ಯಾಪಾರಸ್ಥರ ಅಂತಿಮ ಮತದಾರರ ಪಟ್ಟಿ ಪ್ರಕಟ

Share

ಹಾವೇರಿ: ನಗರಸಭೆ ವ್ಯಾಪ್ತಿಯಲ್ಲಿ ಬೀದಿ ವ್ಯಾಪಾರಸ್ಥರನ್ನು ಸಮೀಕ್ಷೆ ಮುಖಾಂತರ ಗುರುತಿಸಲಾಗಿದ್ದು, ಗುರುತಿನ ಪತ್ರಗಳನ್ನು ನೀಡಲಾಗಿದೆ. ಸದರಿ ಬೀದಿ ಬದಿ ವ್ಯಾಪಾರಸ್ಥರ ಸಮಿತಿಯನ್ನು (ವಿಟಿಸಿ) ಪ್ರಜಾಸತ್ತಾತ್ಮಕ ರೀತಿಯಲ್ಲಿ ಚುನಾವಣೆ ಮುಖಾಂತರ ರಚಿಸಬೇಕಾಗಿರುವುದಿಂದ ಬೀದಿ ಬದಿ ವ್ಯಾಪಾರಸ್ಥರ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಅಂತಿಮ ಮತದಾರರ ಪಟ್ಟಿಯನ್ನು ಹಾವೇರಿ ನಗರಸಭೆ ನೋಟೀಸ್ ಬೋರ್ಡ್‍ನಲ್ಲಿ ಹಾಗೂ ವೆಬ್‍ಸೈಟ್ http://www.havericity.gov.in ನಲ್ಲಿ ಪ್ರಕಟಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.