ಸೆ. 19 ರಂದು ವಾರ್ಷಿಕ ಸ್ನೇಹ ಸಮ್ಮೇಳನ

Share

ಹಾವೇರಿ: ನಗರದ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯ ದಲ್ಲಿ ಸೆ. 19 ರ ಗುರುವಾರ ಬೆಳಿಗ್ಗೆ 10 ಗಂಟೆಗೆ 2018-19 ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದೀಪದಾನ ಸಮಾರಂಭ ಜರುಗಲಿದೆ.

ಬಸವ ಕೇಂದ್ರ ಹೊಸಮಠದ ಬಸವಶಾಂತಲಿಂಗ ಶ್ರೀ ಸಾನಿಧ್ಯ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಹಾವೇರಿ ಗ್ರಂಥಾಲಯಾಧಿಕಾರಿ ಪಿ.ಆರ್. ತಿಪ್ಪೆಸ್ವಾಮಿ, ಬಸವ ಕೇಂದ್ರ ಹೊಸಮಠದ ಆಡಳಿತ ಸದಸ್ಯ ನಾಗೇಂದ್ರ ಕಟಗೋಳ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿ, ಪತ್ರಕರ್ತ ಮಂಜುನಾಥ ಗುಡಿಸಾಗರ ಅವರನ್ನು ಸನ್ಮಾನಿಸಲಾಗುವುದು ಎಂದು ಕಾಲೇಜು ಪ್ರಾಚಾರ್ಯ ಮಾಲತೇಶ ಕುಲಕರ್ಣಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.