ಸಾಮಾಜಿಕ ಜಾಲತಾಣದ ಮೂಲಕ ಕೋಮುಸೌಹಾರ್ದತೆಗೆ ಧಕ್ಕೆ ತರುವ ವಿಚಾರ ಹಾಕಿದರೆ ಕ್ರಮ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ್

Share

ಹಾವೇರಿ: ಸಾಮಾಜಿಕ ಜಾಲತಾಣಗಳಾದ Face Book, what sapp  Twitter ಗಳಲ್ಲಿ ಹಾಗೂ ಇತರೆ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ಸುವ್ಯವಸ್ಥೆಗೆ, ಕೋಮು ಸೌಹಾರ್ದತೆಗೆ ದಕ್ಕೆ ತರುವಂತಹ ಹಾಗೂ ಪರಸ್ಪರ ಗುಂಪಿನ ನಡುವೆ ದ್ವೇಶ ಭಾವನೆ ಬರುವಂತಹ ಪ್ರಚೋದನಾಕಾರಿ ಹೇಳಿಕೆ (Post) ಗಳನ್ನು ಹಾಕುವವರ / Forward ಮಾಡುವವರ ವಿರುದ್ಧ ಕಾನೂನು ರೀತ್ಯಾ ಸೂಕ್ತ ಕ್ರಮ ವಹಿಸಲಾಗುವುದು.

ಈ ಬಗ್ಗೆ ವಾಟ್ಸಪ್ ಗ್ರೂಪ್ ಅಡ್ಮಿನ್ ಗಳು, ಬಳಕೆದಾರರು ಹಾಗೂ ಸಂದೇಶಗಳನ್ನು ಫಾರ್ವರ್ಡ್ ಮಾಡುವವರು ಸೂಕ್ತ ಎಚ್ಚರಿಕೆಯನ್ನು ವಹಿಸಬೇಕು ಹಾಗೂ Whats app ಗ್ರೂಪ್ ಅಡ್ಮಿನ್ ಗಳು ತಮ್ಮ ಗುಂಪಿನ ಸದಸ್ಯರಿಗೆ ಸೂಕ್ತ ತಿಳುವಳಿಕೆ ನೀಡಲು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ ಅವರು ತಿಳಿಸಿದ್ದಾರೆ.