ಹಾವೇರಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಏಳು ಜನರಿಗೆ ಗಾಯ

Share

ಹಾವೇರಿ: ಸಂಜೆ ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಏಳು ಜನರು ಗಾಯಗೊಂಡ ಘಟನೆ ಹಾವೇರಿ ನಗರದ ಇಜಾರಿ ಲಕಮಾಪುರದಲ್ಲಿ ಸೋಮವಾರ ನಡೆದಿದೆ.

ಗಾಯಗೊಂಡವರನ್ನು ರಾಧಿಕಾ (17), ಸತ್ತೀಶ (30), ರತ್ನಾ (20), ಜ್ಯೋತಿ (26), ರಂಜಿತಾ (14), ಉಮಾ (11) ಮತ್ತು ರಕ್ಷಿತಾ (12) ಎಂದು ಗುರುತಿಸಲಾಗಿದೆ.

ಘಟನೆ ನಡೆದ ಕೂಡಲೇ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಂಜೆ ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಅನಿಲ ಸೋರಿಕೆಯಾಗಿ ಸ್ಟೋ ಹಚ್ಚುವ ವೇಳೆ ಏಕಾಏಕಿ ಸ್ಪೋಟಗೊಂಡು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಈ ಕುರಿತು ಹಾವೇರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.