ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯಕ್ಕಾಗಿ ಒತ್ತಾಯಿಸಿ ಎಸ್‍ಎಫ್‍ಐ ಪ್ರತಿಭಟನೆ

Share

ಹಾವೇರಿ: ನಗರದ ಹೊರವಲಯದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ಕಾಲೇಜು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಎಸ್‍ಎಫ್‍ಐ ನೇತೃತ್ವದಲ್ಲಿ ಶುಕ್ರವಾರ ವಿದ್ಯಾರ್ಥಿಗಳು ಕೆಎಸ್‍ಆರ್‍ಟಿಸಿ ಸಾರಿಗೆ ಘಟಕದ ಎದುರಿಗೆ ಪ್ರತಿಭಟನೆ ನಡೆಸಿ ಕೆಎಸ್‍ಆರ್‍ಟಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಸ್‍ಎಫ್‍ಐ ಜಿಲ್ಲಾ ಸಹಕಾರ್ಯದರ್ಶಿ ಬಸವರಾಜ ಬೋವಿ ಮಾತನಾಡಿ, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯಕ್ಕಾಗಿ ಒತ್ತಾಯಿಸಿ ಈ ಹಿಂದೆ ಪ್ರತಿಭಟೆನ ನಡೆಸಿ ಸಮಾಜ ಕಲ್ಯಾಣಾಧಿಕಾರಿಗಳ ಮೂಲಕ ಮಾನ್ಯ ಜಿಲ್ಲಾಧಿಖಾರಿಗಳಿ ಮನವಿ ಸಲ್ಲಿಸಲಾಗಿದೆ. ಅಲ್ಲದೆ, ಕೆಎಸ್‍ಆರ್‍ಟಿಸಿ ಜಿಲ್ಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿದರೂ ಇದುವರೆಗೂ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯವನ್ನು ಕಲ್ಪಿಸಿಲ್ಲ. ಹಾಸ್ಟೆಲ್ ನಗರದಿಂದ ಸುಮಾರು 2 ಕಿ.ಮೀ ದೂರವಿದ್ದು, ವಿದ್ಯಾರ್ಥಿಗಳು ಪ್ರತಿನಿತ್ಯ ನಡೆದುಕೊಂಡು ಹೋಗಬೇಕಾಗಿದೆ.‌ ಹಾಸ್ಟೆಲ್ ಪಕ್ಕದಲಿಯೇ ಬಸ್ ಡಿಪೋ ಇದ್ದರೂ ಅಧಿಕಾರಿಗಳು ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ದೂರಿದರು.


ಕೂಡಲೇ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಕಲ್ಪಿಸದಿದ್ದಲ್ಲಿ ಎಸ್‍ಎಫ್‍ಐ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಎಸ್‍ಎಫ್‍ಐ ಮುಖಂಡರಾದ ಸಚಿನ್‍ಎಂ,ರಾಹುಲ್, ಗಣೇಶ, ಪ್ರದೀಪ್, ಪ್ರತಾಪ್ ಸೇರಿದಂತೆ ಇತರರು ಇದ್ದರು.