ಹೊಸದಾಗಿ 37 ಕೋವಿಡ್ ಪ್ರಕರಣಗಳು ದೃಢ, 20 ಮಂದಿ ಗುಣಮುಖ

Share

ಹಾವೇರಿ: ಜಿಲ್ಲೆಯಲ್ಲಿ ಮಂಗಳವಾರ ಹೊಸದಾಗಿ 37 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 20 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಘವೇಂದ್ರಸ್ವಾಮಿ ಹೆಚ್.ಎಸ್ ಮಾಹಿತಿ ನೀಡಿದ್ದಾರೆ.

ಈವರೆಗೆ ಜಿಲ್ಲೆಯಲ್ಲಿ 11,744 ಮಂದಿಯಲ್ಲಿ ಕೋವಿಡ್ ದೃಢಪಟ್ಟಿದ್ದು, 11,221 ಜನರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 198 ಜನರು ಮೃತಪಟ್ಟಿದ್ದು, 325 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ.

ರಾಣೆಬೆನ್ನೂರ ತಾಲ್ಲೂಕು 23, ಹಾನಗಲ್ ತಾಲ್ಲೂಕು 08, ಹಾವೇರಿ ತಾಲ್ಲೂಕು 04, ಬ್ಯಾಡಗಿ ಹಾಗೂ ಶಿಗ್ಗಾವಿ ತಾಲ್ಲೂಕಿನಲ್ಲಿ ತಲಾ ಒಂದು ಪ್ರಕರಣ ಮಂಗಳವಾರ ದೃಢಪಟ್ಟಿವೆ.