ಉಪಚುನಾವಣಾ ಹಿನ್ನಲೆ ಹಿರೇಕೆರೂರಿನಲ್ಲಿ ಕಾಂಗ್ರೆಸ್ ಪ್ರಚಾರ ಸಭೆ

Share

ಹಿರೇಕೆರೂರು: ಉಪಚುನಾವಣೆ ಹಿನ್ನೆಲೆಯಲ್ಲಿ ಗುರವಾರ ಬಯಲು ಬಸವೇಶ್ವರ ಸಭಾ ಭವನದಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರ ಸಭೆ ಜರುಗಿತು.

ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಬಿ.ಎಚ್.ಬನ್ನಿಕೋಡ್ ಪರವಾಗಿ ಮತಯಾಚನೆಗೆ ಕೈಗೊಳ್ಳಬೇಕಾದ ಸಿದ್ದತೆಗಳ ಬಗ್ಗೆ ಚರ್ಚಿಸಲಾಯಿತು.

ಸಭೆಯ ಅಧ್ಯಕ್ಷಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಮಡಿವಾಳರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ರುದ್ರಪ್ಪ ಲಮಾಣಿ, ಕಾಂಗ್ರೆಸ್ ಅಭ್ಯರ್ಥಿ ಬಿ. ಎಚ್.ಬನ್ನಿಕೋಡ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ, ಜಿಲ್ಲಾ ಪಂಚಾಯತ್ ಸದಸ್ಯ ಪ್ರಕಾಶ್ ಬನ್ನಿಕೋಡ್, ಮುಖಂಡರಾದ ಅಶೋಕ್ ಪಾಟೀಲ್, ಬಿ.ಏನ್ ಬಣಕಾರ್,ತಿಪ್ಪಣ್ಣನವರ, ಸಲಿಂ ಮುಲ್ಲಾ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.