ನಿಯಂತ್ರಣ ತಪ್ಪಿ ಕಾರು ಪಲ್ಟಿ, ಇಬ್ಬರ ಸಾವು

Share

ಹಾವೇರಿ: ಚಲುಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಇಬ್ಬರು ಮೃತ ಪಟ್ಟು, ಓರ್ವನಿಗೆ ಗಂಭೀರ ಗಾಯವಾದ ಘಟನೆ ಜಿಲ್ಲೆಯ ಹಿರೆಕೇರೂರು ತಾಲೂಕಿನ ಚಿಕ್ಕಬೂದಿಹಾಳ ಗ್ರಾಮದ ಬಳಿ ಗುರುವಾರ ನಡೆದಿದೆ.

ಮೃತರನ್ನು ಕಾರ್ತಿಕ್ ಈಳಗೇರ್ (26), ಪವನ್ ಬೊಗಾವಿ (26), ಎಂದು ಗುರುತಿಸಲಾಗಿದ್ದು, ಗಾಯಗೊಂಡಿರುವ ವ್ಯಕ್ತಿಯನ್ನು ಸಂತೋಷ ರಾಗಿಕೊಪ್ಪ ಎಂದು ತಿಳಿದು ಬಂದಿದೆ. ಗಾಯಾಳುವಿನ ಸ್ಥಿತಿ ಚಿಂತಾಜನಕವಾಗಿದೆ.

ಅಪಘಾತಕ್ಕೀಡಾದವರು ತಾಲೂಕಿನ ಹಂಸಭಾವಿ ಗ್ರಾಮದ ನಿವಾಸಿಗಳಾಗಿದ್ದು, ರಾಣೇಬೆನ್ನೂರು ಇಂದ ಹಂಸಭಾವಿ ಸ್ವಗ್ರಾಮಕ್ಕೆ ಬರುವಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹಂಸಭಾವಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.