ರಾಷ್ಟ್ರಮಟ್ಟದ ಹೆಗ್ಗಳಿಕೆಗೆ ಪಾತ್ರವಾಯಿತು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ!!

Share

ಹುಬ್ಬಳ್ಳಿ, ಜೂನ 30: ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯು ಉತ್ತರ ಕರ್ನಾಟಕದ ಜನರಿಗೆ ಸಂಜೀವಿನಿಯಾಗಿದೆ. ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ  ಸಾಕಷ್ಟು ಜನರಿಗೆ ಮರು ಜೀವವನ್ನು ನೀಡಿದೆ. ಕಿಮ್ಸ್ನಲ್ಲಿ ಸುಮಾರು 365ಕ್ಕೂ ಹೆಚ್ಚು ಕೋವಿಡ್ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ ಮಾಡಿಸಿದೆ.

ಈ ಹಿನ್ನೆಲೆಯಲ್ಲಿ ಸಾಕಷ್ಟು ಸೇವೆಯಿಂದ ಗುರುತಿಸಿಕೊಂಡಿರುವ ಕಿಮ್ಸ್ ಆಸ್ಪತ್ರೆಯ ಪ್ರಸೂತಿ ಹಾಗೂ ಶಸ್ತ್ರಚಿಕಿತ್ಸೆ ಕಾರ್ಯಕ್ಕೆ ಕೇಂದ್ರ ಸರ್ಕಾರ ಲಕ್ಷಾ ಸರ್ಟಿಫಿಕೇಷನ್​ನಲ್ಲಿ 92.5% ಅಂಕಗಳನ್ನು ನೀಡಿದೆ. ರಾಷ್ಟ್ರೀಯ ಮಟ್ಟದಲ್ಲಿಯೇ 2ನೇ ಅತ್ಯುತ್ತಮ ಪ್ರಸೂತಿ ಹಾಗೂ ಶಸ್ತ್ರಚಿಕಿತ್ಸೆ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕಿಮ್ಸ್ ಆಸ್ಪತ್ರೆಯ ಉತ್ತಮ ಕಾರ್ಯ ನಿರ್ವಹಣೆಯಿಂದ ಈಗ ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ. ಕೇಂದ್ರ ಸರ್ಕಾರದ ಲಕ್ಷಾ(LAQSHA) ಸರ್ಟಿಫಿಕೇಷನ್​ನಿಂದಾಗಿ  ರಾಷ್ಟ್ರೀಯ ಮಟ್ಟದ ಕೀರ್ತಿ ಪಡೆದಿದೆ.

ದೇಶದಲ್ಲಿಯೇ ಉತ್ತಮ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕಿಮ್ಸ್ ಉತ್ತರ ಕರ್ನಾಟಕ ಭಾಗದ ಹಲವು ರೋಗಿಗಳ ಸಂಜೀವಿನಿಯಾಗಿದೆ ಎಂಬುದೇ ಹೆಮ್ಮೆಯ ವಿಷಯ. ಕಿಮ್ಸ್ ಕಾರ್ಯ ಸಾಕಷ್ಟು ಜನಮನ್ನಣೆ ಪಡೆದಿದ್ದು, ಈಗ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ.