ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಶಿಕ್ಷಕರಿಂದ ಅರ್ಜಿ ಆಹ್ವಾನ

Share

ಹಾವೇರಿ: ಪ್ರಸಕ್ತ 2019-20ನೇ ಸಾಲಿನಲ್ಲಿ ಸೆಪ್ಟೆಂಬರ್ 5 ರ ಶಿಕ್ಷಕರ ದಿನಾಚರಣೆಯಂದು ನೀಡಲಾಗುವ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆಯಲು ಜಿಲ್ಲೆಯ ಅರ್ಹ ಶಿಕ್ಷಕ/ಶಿಕ್ಷಕಿಯರಿಂದ ಅರ್ಜಿ‌ ಆಹ್ವಾನಿಸಲಾಗಿದೆ.
ಆಸಕ್ತ ಶಿಕ್ಷಕರು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಆಯಾ ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ದಿನಾಂಕ 19-8-2019 ರೊಳಗಾಗಿ ಸಲ್ಲಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.