ಅಪಘಾತ: ವ್ಯಕ್ತಿ ಸಾವು

Share

ಹಾವೇರಿ: ನಗರದ ಹಳೇ ಪಿ.ಬಿ. ರಸ್ತೆಯಲ್ಲಿ ಸೋಮವಾರ ರಾತ್ರಿ ಬೈಕ್‌ ಮತ್ತು ಟಾಟಾ ಏಸ್‌ ವಾಹನದ ನಡುವೆ ಡಿಕ್ಕಿ ಸಂಭವಿಸಿ, ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯನ್ನು ಶಿಗ್ಗಾಂವಿಯ ರವಿ ಅಂಗಡಿ (15) ಎಂದು ಗುರುತಿಸಲಾಗಿದೆ. ನಾಗರಾಜ ತಳವಾರ ಮತ್ತು ಸುಭಾಷ್‌ ಕುರುಬರ ಗಂಭೀರವಾಗಿ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಮೂವರು ಯುವಕರು ಬೈಕ್‌ನಲ್ಲಿ ಹಾವೇರಿಯಿಂದ ಶಿಗ್ಗಾವಿಗೆ ಹೋಗುತ್ತಿದ್ದ ಸಂದರ್ಭ ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಕುರಿತು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ