ಅಲ್ಪಸಂಖ್ಯಾತರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Share

ಹಾವೇರಿ: ಬಿ.ಎಡ್ ಹಾಗೂ ಡಿ.ಎಡ್. ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. ವಾರ್ಷಿಕ ಆದಾಯ 6 ಲಕ್ಷ ರೂ. ಮೀರಿರಬಾರದು. ವಿದ್ಯಾರ್ಥಿಯು ರಾಜ್ಯ ಅಥವಾ ಕೇಂದ್ರ ಸರ್ಕಾರಿ ಉದ್ಯೋಗಿ ಅಥವಾ ಪೂರ್ಣಕಾಲಿಕ ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿರಬಾರದು. ಅಭ್ಯರ್ಥಿಗಳನ್ನು ಅರ್ಹತೆ ಪರೀಕ್ಷೆ/ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಬಿ.ಎಡ್ ಹಾಗೂ ಡಿ.ಎಸ್. ಕೋರ್ಸ್‍ಗಳಲ್ಲಿ ದಾಖಲಾಗಿರುವ ಹಾಗೂ ಶುಲ್ಕವನ್ನು ಭರಿಸುವ ಬಗ್ಗೆ ಎಲ್ಲಾ ಅಧಿಕೃತ ದಾಖಲಾತಿಗಳನ್ನು ಸಲ್ಲಿಸಬೇಕು.

National council for Teacher Education ನಿಂದ ಮಾನ್ಯತೆ ಪಡೆದಿರುವ ಬಿ.ಎಡ್. ಹಾಗೂ Department of State Educational Research and Training ನಿಂದ ಮಾನ್ಯತೆ ಪಡೆದಿರುವ ಡಿ.ಎಡ್.ಕೋರ್ಸ್‍ಗಳ ಸರ್ಕಾರಿ, ಅರೆಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳ ದಾಖಲಾತಿ ಹೊಂದಿರುವ ವಿದ್ಯಾರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ.


ಅರ್ಜಿ ನಮೂನೆಗಳನ್ನು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಾವೇರಿ ಅಥವಾ ಜಿಲ್ಲೆಯ ಎಲ್ಲ ತಾಲೂಕು ಮಾಹಿತಿ ಕೇಂದ್ರಗಳಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿಮಾಡಿದ ಅರ್ಜಿಯನ್ನು ದಿನಾಂಕ 30-08-2019 ರೊಳಗಾಗಿ ಸಂಬಂಧಪಟ್ಟ ತಾಲೂಕು ಮಾಹಿತಿ ಕೇಂದ್ರ ಅಥವಾ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ:08375-234505ನ್ನು ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಗೋಪಾಲ ಲಮಾಣಿ ಅವರು ತಿಳಿಸಿದ್ದಾರೆ.