ಅ.2ರಂದು ಅರ್ಥಪೂರ್ಣವಾಗಿ ಗಾಂಧಿ ಜಯಂತಿ ಆಚರಿಸಲು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಸೂಚನೆ

Share

ಹಾವೇರಿ: ಮಹಾತ್ಮಗಾಂಧೀಜಿ ಹಾಗೂ ಲಾಲ್‍ಬಹದ್ದೂರ ಶಾಸ್ತ್ರೀ ಅವರ ಜಯಂತಿಯನ್ನು ಅಕ್ಟೋಬರ್ 2 ರಂದು ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಇಲಾಖಾ ಅಧಿಕಾರಿಗಳು ಪೂರ್ವ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಮಹಾತ್ಮಗಾಂಧೀಜಿಯವರ ರಚನಾತ್ಮಕವಾದ ಕಾರ್ಯಕ್ರಮಗಳನ್ನು ಯುವ ಸಮೂಹಕ್ಕೆ ಪರಿಚಯಿಸುವ ನಿಟ್ಟಿನಲ್ಲಿ ವೈವಿದ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು.

ಅಕ್ಟೋಬರ್ 2 ರಂದು ಬೆಳಿಗ್ಗೆ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ, ಸದ್ಭಾವನಾ ಯಾತ್ರೆ, ಸಾಮೂಹಿಕ ಸ್ವಚ್ಛತಾ ಕಾರ್ಯಕ್ರಮ, ಗಾಂಧೀಜಿ ಕುರಿತು ವಿಚಾರ ಸಂಕಿರಣ, ಕಿರುಹೊತ್ತಿಗೆಗಳ ಬಿಡುಗಡೆ, ಗಾಂಧಿ ಚಿತ್ರಪ್ರದರ್ಶನ, ಸರ್ವಧರ್ಮ ಪ್ರಾರ್ಥನೆ, ಗಾಂಧೀಜಿ ಅವರ ಗೀತೆಗಳ ಗಾಯನ ಕಾರ್ಯಕ್ರಮವನ್ನು ಆಯೋಜಿಸಲು ತೀರ್ಮಾನಿಸಲಾಯಿತು ಹಾಗೂ ಲಾಲ್‍ಬಹದ್ದೂರ ಶಾಸ್ತ್ರೀ ಅವರ ಜೀವನ ವಿಚಾರಧಾರೆಗಳ ಕುರಿತಂತೆ ಉಪನ್ಯಾಸ ಆಯೋಜಿಸಲು ತೀರ್ಮಾನಿಸಲಾಯಿತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ನಗರಸಭೆ, ಜಿಲ್ಲಾ ಪಂಚಾಯತ್ ಸೇರಿದಂತೆ ವಿವಿಧ ಅಧಿಕಾರಿಗಳು ಸಮನ್ವಯದಿಂದ ಕಾರ್ಯಕ್ರಮ ಆಯೋಜಿಸುವಂತೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಸೂಚಿಸಿದರು.

ಪೂರ್ವ ಸಿದ್ಧತಾ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಸವಣೂರ ಉಪ ವಿಭಾಗಾಧಿಕಾರಿ ಶ್ರೀಮತಿ ಅನ್ನಪೂರ್ಣ ಮುದಕ್ಕಮನವರ, ವಾರ್ತಾಧಿಕಾರಿ ಡಾ.ಬಿ.ಆರ್.ರಂಗನಾಥ, ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಜಾಫರ ಸುತಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ, ಪೌರಾಯುಕ್ತ ಬಸವರಾಜ ಜಿದ್ದಿ, ಚುನಾವಣಾ ತಹಶೀಲ್ದಾರ ಪ್ರಶಾಂತ ನಾಲವಾರ, ಪಶು ಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಡಾ.ರಾಜು ಕೂಲೇರ ಇತರರು ಉಪಸ್ಥಿತರಿದ್ದರು.