ಉಚಿತ ಕಂಪ್ಯೂಟರ್ ತರಬೇತಿಗೆ ಅರ್ಜಿ ಆಹ್ವಾನ

Share

ಹಾವೇರಿ: ಯಸ್((YES) ಕೇಂದ್ರ ಹಾಗೂ ಹಾವೇರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 1 ರಿಂದ ಬೇಸಿಕ್ ಕಂಪ್ಯೂಟರ್ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿರಬೇಕು. ಆಸಕ್ತರು ಆಸಕ್ತ ಯುವಕ, ಯುವತಿಯರು ತಮ್ಮ ಮೂಲ ಅಂಕಪಟ್ಟಿ, ಆಧಾರ್ ಕಾರ್ಡ್ ಪ್ರತಿ ಹಾಗೂ ಇತ್ತೀಚಿನ ಮೂರು ಭಾವಚಿತ್ರದೊಂದಿಗೆ  31 ಆಗಸ್ಟ್ 2019 ರೊಳಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ10, 3ನೇ ಮಹಡಿ ‘ಎ’ಬ್ಲಾಕ್ ದೇವಗಿರಿ ರಸ್ತೆ ಹಾವೇರಿ ಈ ವಿಳಾಸಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ:08375-249291ನ್ನು ಸಂಪರ್ಕಿಸಬಹುದು.