ಉ.ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ನಾಳೆ ಪ್ರಮಾಣವಚನ

Share

ಲಖನೌ, ಮಾರ್ಚ್ 24: ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಯೋಗಿ ಆದಿತ್ಯನಾಥ್ ನಾಳೆ (ಶುಕ್ರವಾರ) ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಉತ್ತರ ಪ್ರದೇಶದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಯೋಗಿ ಆದಿತ್ಯನಾಥ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಬಳಿಕ ರಾಜಭವನಕ್ಕೆ ತೆರಳಿ ನೂತನ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಹಕ್ಕು ಪತ್ರವನ್ನು ಮಂಡಿಸಲಿದ್ದಾರೆ.

ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಯೋಗಿ ಆದಿತ್ಯನಾಥ್ ಧನ್ಯವಾದಗಳನ್ನು ಸಲ್ಲಿಸಿದರು.

ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾದಾಗ ಯಾವುದೇ ಆಡಳಿತಾತ್ಮಕ ಅನುಭವವನ್ನು ಹೊಂದಿರಲಿಲ್ಲ. ಆದರೆ ಉತ್ತರ ಪ್ರದೇಶದಲ್ಲಿ ಉತ್ತಮ ಆಡಳಿತ ನಡೆಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಮಾರ್ಗದರ್ಶನ ನೀಡಿದರು ಎಂದು ಹೇಳಿದ್ದಾರೆ.