ಕೊರೊನಾ ಸೋಂಕು ತಡೆಗೆ ಕ್ರಮ: 21 ವಿಚಾರಣಾಧೀನ ಕೈದಿಗಳ ಬಿಡುಗಡೆ

Share

ಹಾವೇರಿ: ಸುಪ್ರೀಂ ಕೋರ್ಟ್‌ ಆದೇಶದನ್ವಯ ಕೊರೊನಾ ವೈರಸ್‌ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ತಾಲ್ಲೂಕಿನ ಕೆರೆಮತ್ತಿಹಳ್ಳಿಯಲ್ಲಿರುವ ಜಿಲ್ಲಾ ಕಾರಾಗೃಹದಿಂದ 7 ವರ್ಷದೊಳಗೆ ಶಿಕ್ಷೆಗೆ ಗುರಿಯಾಗಬಹುದಾದ 21 ವಿಚಾರಣಾಧೀನ ಸೋಮವಾರ ಬಿಡುಗಡೆ ಮಾಡಲಾಯಿತು.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಎಸ್‌.ಎಚ್‌. ರೇಣುಕಾದೇವಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿಯ ಸಭೆ ಸೋಮವಾರ ನಡೆಯಿತು. ಈ ಸಭೆಯಲ್ಲಿ ಒಂದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶರಾದ ಸೈಯದ್‌ ಕಿಣಿ, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ವಿದ್ಯಾಶ್ರೀ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಜಿ.ದೇವರಾಜು, ಜಿಲ್ಲಾ ಕಾರಾಗೃಹ ಅಧೀಕ್ಷಕ ತಿಮ್ಮಣ್ಣ ಬಿ. ಭಜಂತ್ರಿ, ವಕೀಲರು ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.

ಜಿಲ್ಲಾ ಮಟ್ಟದ ಸಮಿತಿಯ ತೀರ್ಮಾನದಂತೆ 21 ವಿಚಾರಣಾಧೀನ ಕೈದಿಗಳನ್ನು ಬಿಡುಗಡೆ ಮಾಡಲಾಯಿತು.