ಕೋವಿಡ್ ಲಾಕ್‍ಡೌನ್ ಅವಧಿಯಲ್ಲಿ ನಷ್ಟ ಅನುಭವಿಸಿದ ಹಣ್ಣು-ತರಕಾರಿ ಬೆಳೆಗಾರರಿಗೆ ಪರಿಹಾರ

Share

ಹಾವೇರಿ: ಕೋವಿಡ್ -19 ಲಾಕ್‍ಡೌನ್ ಘೋಷಣೆಮಾಡಿದ ಮಾಚ್ 24 ರಿಂದ ಮೇ 17ರವೆಗಿನ ಅವಧಿಯಲ್ಲಿ ಜಿಲ್ಲೆಯಲ್ಲಿ ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ ಉಂಟಾದ ನಷ್ಟಕ್ಕೆ ಪ್ರತಿ ಹೆಕ್ಟೇರ್‍ಗೆ 15 ಸಾವಿರ ರೂ.ನಂತೆ ಪರಿಹಾರ ನೀಡಲು ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರದ ನಿಯಮದಂತೆ ಆಯ್ದ ಹಣ್ಣು-ತರಕಾರಿ ಬೆಳೆಗಳಿಗೆ ಗರಿಷ್ಠ ಒಂದು ಹೆಕ್ಟೇರ್‍ಗೆ ಮಿತಿಗೊಳಿಸಿ ಪ್ರತಿ ಹೆಕ್ಟೇರ್ 15 ಸಾವಿರ ರೂ.ಪರಿಹಾರ ನೀಡಲಾಗುವುದು. ಹಣ್ಣಿನ ಬೆಳೆಗಳಾದ ಬಾಳೆ, ಪಪ್ಪಾಯ, ಅಂಜೂರ, ಅನಾನಸ್, ಕಲ್ಲಂಗಡಿ ಹಾಗೂ ಖರಬೂಜ ಹಾಗೂ ತರಕಾರಿ ಬೆಳೆಗಳಾದ ಟೊಮೋಟೋ, ಹಸಿಮೆಣಸಿನಕಾಯಿ, ಹೂಕೋಸು, ಎಲೆಕೋಸು, ಸಿಹಿಕುಂಬಳ, ಬೂದಗುಂಬಳ, ಕ್ಯಾರೇಟ್, ಈರುಳ್ಳಿ ಹಾಗೂ ದಪ್ಪ ಮೆಣಸಿನಕಾಯಿ ಬೆಳೆಗಳನ್ನು ಮಾತ್ರ ಪರಿಗಣಿಸಲಾಗುವುದು.

ಫಲಾನುಭವಿಗಳ ಆಯ್ಕೆಯನ್ನು ಹಾಲಿ ಲಭ್ಯವಿರುವ 2019-20ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಬೆಳೆ ಸಮೀಕ್ಷೆ ಅನುಗುಣವಾಗಿ ಪರಿಗಣಿಸತಕ್ಕದ್ದು. 2019-20ನೇ ಸಾಲಿನ ಮುಂಗಾರು ಹಿಂಗಾರು ಬೆಳೆ ಸಮೀಕ್ಷೆಯಲ್ಲಿ ದಾಖಲಾಗಿರುವ ರೈತರು ಯಾವುದೇ ದಾಖಲಾತಿಗಳನ್ನು ನೀಡುವುದು ಅವಶ್ಯಕತೆ ಇರುವುದಿಲ್ಲ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.